ADVERTISEMENT

ಒಳ ಮೀಸಲು; ಮುಂದಿನ ಸಂಪುಟ ಸಭೆಗೆ: ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 16:14 IST
Last Updated 30 ಅಕ್ಟೋಬರ್ 2025, 16:14 IST
<div class="paragraphs"><p>ಎಚ್‌.ಕೆ.ಪಾಟೀಲ</p></div>

ಎಚ್‌.ಕೆ.ಪಾಟೀಲ

   

ಬೆಂಗಳೂರು: ಒಳ ಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕೆ ಕಾಯ್ದೆ ತರುವ ವಿಚಾರದ ಬಗ್ಗೆ ಕಾನೂನು ಮತ್ತು ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸಬೇಕಿದೆ. ಹೀಗಾಗಿ ಕರಡು ಮಸೂದೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಕರಡು ಮಸೂದೆಯ ಬಗ್ಗೆ ಬುಧವಾರವೇ ಚರ್ಚೆ ನಡೆಯಬೇಕಿತ್ತು, ಇನ್ನೂ ಚರ್ಚೆ ನಡೆದಿಲ್ಲ. ಹೀಗಾಗಿ ಇವತ್ತಿನ ಸಂಪುಟ ಸಭೆಗೆ ಪ್ರಸ್ತಾವ ಬಂದಿಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ADVERTISEMENT

ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಸಭೆ ಮಾಡಿ ಆ ಬಳಿಕ ಸಂಪುಟಕ್ಕೆ ಮಸೂದೆ ತರಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕ ಸ್ಥಳದಲ್ಲಿ 10ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿರುವ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದ್ದು, ಅದನ್ನು ತೆರವುಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ವಯನಾಡು ಪ್ರವಾಸಕ್ಕೆ ಸಂಬಂಧಿಸಿದಂತೆ ಕೆಎಸ್‌ಟಿಡಿಸಿ ನೀಡಿರುವ ಜಾಹೀರಾತಿನ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಂದ ವಿವರಣೆ ಕೇಳಿದ್ದೇನೆ’ ಎಂದು ಎಚ್‌.ಕೆ.ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.