ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜೂನ್ ವೇಳೆಗೆ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಿದ್ದಾರೆ’ ಎಂದು ಕಾಂಗ್ರೆಸ್‌ನ ಎಚ್.ಆಂಜನೇಯ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಒಳಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದೆ. 2024ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಹಲವು ರಾಜ್ಯಗಳು ಒಳಮೀಸಲಾತಿ ಅನುಷ್ಠಾನಕ್ಕೆ ಮುಂದಾಗಿವೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಅಂಬೇಡ್ಕರ್ ಜಯಂತಿಯಂದು ಒಳಮೀಸಲಾತಿ ಜಾರಿಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರೂ ಅದೇ ಹಾದಿಯಲ್ಲಿದ್ದಾರೆ’ ಎಂದಿದ್ದಾರೆ.
‘ರಾಜ್ಯದಲ್ಲಿ ವಿವಿಧ ಜಾತಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ಕಲ್ಪಿಸಲು ಸಿದ್ದರಾಮಯ್ಯ ಅವರು ನಿಖರ ದತ್ತಾಂಶ ಸಂಗ್ರಹಕ್ಕಾಗಿ ಸಮೀಕ್ಷೆಗೆ ಆದೇಶಿಸಿದ್ದರು. ಅದರ ಫಲವಾಗಿ ಈಗ ವರದಿಯನ್ನು ಸಂಪುಟ ಸಭೆಯ ಮುಂದೆ ಇರಿಸಲಾಗಿದೆ. ಆ ವರದಿಯ ಶಿಫಾರಸಿನಂತೆ ಮೀಸಲಾತಿ ಹೆಚ್ಚಾಗಲಿದೆ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.