ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ . ನಾಗಮೋಹನ್ ದಾಸ್ ಆಯೋಗ
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.
ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, 'ಎರಡು ತಿಂಗಳುಗಳಿಂದ ವರದಿ ತಯಾರು ಮಾಡಿದ್ದೇವೆ. ಸುಮಾರು 104 ಪುಟಗಳ ವರದಿ ಕೊಟ್ಟಿದ್ದೇವೆ' ಎಂದರು.
'ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡೋಣ' ಎಂದರು.
'ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ’ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ, ಆಹಾರ ಸಚಿವ ಕೆ. ಎಚ್.ಮುನಿಯಪ್ಪ, ಅಬಕಾರಿ ಸಚಿವ ತಿಮ್ಮಾಪುರ, ಮಾಜಿ ಸಚಿವ ಎಚ್.ಆಂಜನೇಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.