ADVERTISEMENT

ಒಳ ಮೀಸಲು ಸಮೀಕ್ಷೆ | ಮಾದಿಗ ಮುಖಂಡರ ಸಭೆ ಇಂದು: ಎಚ್‌.ಆಂಜನೇಯ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 0:00 IST
Last Updated 27 ಏಪ್ರಿಲ್ 2025, 0:00 IST
<div class="paragraphs"><p>ಎಚ್‌.ಆಂಜನೇಯ</p></div>

ಎಚ್‌.ಆಂಜನೇಯ

   

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಕುಟುಂಬಗಳ ದತ್ತಾಂಶ ಸಂಗ್ರಹಕ್ಕೆ ಮೇ 5ರಿಂದ ಆರಂಭವಾಗಲಿರುವ ಸಮೀಕ್ಷೆ ವೇಳೆ ‘ಮಾದಿಗರ ಪಾತ್ರವೇನು’ ಎಂಬ ವಿಷಯ ಕುರಿತು ಚರ್ಚಿಸಲು ಭಾನುವಾರ (ಏಪ್ರಿಲ್‌ 27) ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.

ಕರ್ನಾಟಕ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಸಮೀಕ್ಷೆಯ ಕುರಿತಂತೆ ಮಾದಿಗ ಮತ್ತು ಸಂಬಂಧಿತ ಜಾತಿಗಳಲ್ಲಿ ಜಾಗೃತಿ ಮೂಡಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ADVERTISEMENT

‘ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ರಾಜ್ಯದಲ್ಲಿ ಜಾತಿಗಣತಿ ನಡೆಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸುವುದು ಸೂಕ್ತವೆಂಬ ಎಚ್.ಎನ್. ನಾಗಮೋಹನ್‌ದಾಸ್‌ ನೇತೃತ್ವದ ಆಯೋಗದ ಶಿಫಾರಸಿನ ಮೇರೆಗೆ ರಾಜ್ಯ ಸರ್ಕಾರ ಜಾತಿ ಜನಗಣತಿ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಸಿದ ಎಡ ಗುಂಪಿನಲ್ಲಿ ಗುರುತಿಸಿಕೊಂಡಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಸಮುದಾಯದ ಹಾಲಿ–ಮಾಜಿ ಸಚಿವರು, ಶಾಸಕರು, ಸಂಸದರು, ಬುದ್ಧಿಜೀವಿಗಳು, ಚಿಂತಕರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.