ಸಾಂಕೇತಿಕ ಚಿತ್ರ
ಬೆಂಗಳೂರು: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯ ಆಯೋಗ ಒಳ ಮೀಸಲಾತಿ ಸಮೀಕ್ಷೆಗೆ 60 ಸಾವಿರ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಅವರಿಗೆ ಗಳಿಕೆ ರಜೆ, ಗೌರವಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಕೆ. ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಶಿಕ್ಷಕರು ಬೇಸಿಗೆ ರಜೆ ತ್ಯಾಗ ಮಾಡಿ ಗಣತಿದಾರರಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಅವರಿಗೆ ನಿಯಮದ ಪ್ರಕಾರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.