ADVERTISEMENT

ಒಳಮೀಸಲಾತಿ: ನಾಗಮೋಹನ್ ದಾಸ್ ಸಮಿತಿಯ ಮಧ್ಯಂತರ ವರದಿಯ ಶಿಫಾಸುಗಳೇನು?

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 9:01 IST
Last Updated 27 ಮಾರ್ಚ್ 2025, 9:01 IST
<div class="paragraphs"><p>ಸಿಎಂಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ ದಾಸ್</p></div>

ಸಿಎಂಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ ದಾಸ್

   

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.

ಈ ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ

  • ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು.

    ADVERTISEMENT
  • ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸದಾದ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯಪಡುತ್ತಾರೆ.

  • ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು, ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆ ಮಾಡುವ ಸಿಬ್ಬಂದಿಗೆ ತರಬೇತಿ, ಅಗತ್ಯವಿರುವ ಸಂಪನ್ಮೂಲಗಳ ಕ್ರೋಢೀಕರಣ ಇತ್ಯಾದಿಗಳ ಉಸ್ತುವಾರಿ ನೋಡಿಕೊಳ್ಳಲು ಉನ್ನತಮಟ್ಟದ ಸಮಿತಿಯೊಂದನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಡುತ್ತದೆ.

  • ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯ ಉಪಜಾತಿಗಳ ವರ್ಗೀಕರಣ ಮಾಡಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆಯ ಮೇಲೆ ಹಂಚಿಕೆ ಮಾಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.