ADVERTISEMENT

ತುಮಕೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನ: 41 ಎಕರೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:49 IST
Last Updated 5 ಮೇ 2025, 15:49 IST
ಎಂ.ಬಿ. ಪಾಟೀಲ ಅವರು ಕೆಎಸ್‌ಸಿಎ ಪದಾಧಿಕಾರಿಗಳಿಗೆ ಭೂಸ್ವಾಧೀನದ ಪತ್ರ ವಿತರಿಸಿದರು
ಎಂ.ಬಿ. ಪಾಟೀಲ ಅವರು ಕೆಎಸ್‌ಸಿಎ ಪದಾಧಿಕಾರಿಗಳಿಗೆ ಭೂಸ್ವಾಧೀನದ ಪತ್ರ ವಿತರಿಸಿದರು   

ಬೆಂಗಳೂರು: ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಹಸ್ತಾಂತರಿಸಿದರು.

ಸ್ವಾಧೀನ ಪತ್ರವನ್ನು ಪಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಪದಾಧಿಕಾರಿಗಳು, ‘ಈಗ ಕೊಟ್ಟಿರುವ ಜಾಗದ ಪಕ್ಕದಲ್ಲಿರುವ 6 ಎಕರೆ 20 ಗುಂಟೆ ಖರಾಬು ಜಮೀನನ್ನು ಕೆಎಸ್‌ಸಿಎಗೆ ನೀಡಬೇಕು’ ಎಂದು ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವ ಎಂ.ಬಿ. ಪಾಟೀಲ, ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ  ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ನಿರ್ಮಾಣವಾಗಬೇಕಾದ ಅಗತ್ಯವಿದೆ ಎಂದರು.

ADVERTISEMENT

‘ಬೆಂಗಳೂರಿಗೆ ಹೊಂದಿಕೊಂಡಂತಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳುತ್ತಿದ್ದಾರೆ.  ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ’ ಎಂದು ಸಚಿವರು ಹೇಳಿದರು.

‘ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ. ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೆಐಎಡಿಬಿ ಮೂಲಕ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ₹15 ಲಕ್ಷದಂತೆ ನೀಡಲಾಗಿದೆ’ ಎಂದು ಪಾಟೀಲ ಹೇಳಿದರು.

ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.