ADVERTISEMENT

ಅಂತರರಾಷ್ಟ್ರೀಯ ಯೋಗ ದಿನ: ಮೈಸೂರಿನಲ್ಲಿ ಯೋಗಾಭ್ಯಾಸ ಮಾಡಿದ ಪ್ರಧಾನಿ ಮೋದಿ

8ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಸುಮಾರು 15 ಸಾವಿರ ಜನರೊಂದಿಗೆ ಯೋಗ ಮಾಡಿದರು. ರಾಜ್ಯದಲ್ಲಿ ವಿವಿಧ ಕಡೆ ನಡೆದ ಯೋಗ ಕಾರ್ಯಕ್ರಮಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 8:45 IST
Last Updated 21 ಜೂನ್ 2022, 8:45 IST

ಬೆನ್ನುನೋವು ನಿವಾರಿಸುವ ಯೋಗಾಸನಗಳು

ಚಾಮರಾಜನಗರದಲ್ಲಿ ಯೋಗ ದಿನ: ಮಕ್ಕಳು, ಮಹಿಳೆಯರು ಹಿರಿಯರಿಂದ ಯೋಗಾಭ್ಯಾಸ

ಚಾಮರಾಜನಗರ: ಜಿಲ್ಲೆಯಾದ್ಯಂತ ಮಂಗಳವಾರ 8ನೇ ಅಂತರರಾಷ್ಟ್ರೀಯ ಯೋಗ ದಿನವನ್ಜು ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಲಾಯಿತು.

ಮೈಸೂರು ರಾಜವಂಶಸ್ಥರೊಂದಿಗೆ ಇಡ್ಲಿ, ಮೈಸೂರು ಪಾಕ್ ಸವಿದ ಪ್ರಧಾನಿ ಮೋದಿ

ಫೋಟೊಗಳಲ್ಲಿ ನೋಡಿ: ಮೈಸೂರಲ್ಲಿ 8 ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

ಅಂತರರಾಷ್ಟ್ರೀಯ ಯೋಗ ದಿನ: ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ ಎಂದ ಸಿದ್ದರಾಮಯ್ಯ

ಚಿತ್ರದುರ್ಗದ ಚಂದ್ರವಳ್ಳಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ಯ ಇಲಾಖೆ ಹಾಗೂ ಯೋಗ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೋಟೆ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಆಸ್ತಮಾ ನಿವಾರಣೆಗೆ ಈ ಆಸನ ಮಾಡಿ | Yoga Day

ಕೋಲಾರದ ಶತಶೃಂಗ ಪರ್ವತ ಶ್ರೇಣಿಯ ಅಂತರಗಂಗೆ ಬೆಟ್ಟದ ಪ್ರಕೃತಿ ನಡುವೆ ಯೋಗ ಪ್ರದರ್ಶನ

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು

ಶಿರಸಿ ತಾಲ್ಲೂಕಿನ ಸ್ವರ್ಣವಲ್ಲಿ ಮಠದಲ್ಲಿ ಯೋಗ ದಿನಾಚರಣೆ ಅಂಗವಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಯೋಗಾಸನ ಮಾಡಿದರು.

ಶ್ರೀರಂಗಪಟ್ಟಣ ರಂಗನಾಥ ಸ್ವಾಮಿ ದೇವಾಲಯದ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಯೋಗ ದಿನಾಚರಣೆಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಚಾಲನೆ ನೀಡಿದರು

.

ಕಾರವಾರ: ಯೋಗಾಸನ ಮಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರವಾರ: ನಗರದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ವಿವಿಧ ಯೋಗಾಸನಗಳನ್ನು ಮಾಡಿದರು.

ADVERTISEMENT

 ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕಿ ರೂಪಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಬಿ.ಜೆ.ಪಿ.ಯ ಪ್ರಮುಖರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕೋಲಾರ: ಬೆಟ್ಟಗಳ ನಡುವೆ ಯೋಗ ವೈಭವ

ಯೋಗಾಸಕ್ತರ ಮನೋಲ್ಲಾಸ: ಸುವರ್ಣ ವಿಧಾನಸೌಧದ ಎದುರು ಯೋಗಾ ಯೋಗ

ಕೃಷ್ಣಮಠದ ರಾಜಾಂಗಣದಲ್ಲಿ ಯೋಗ

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. 
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಯೋಗದಿನ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗದ ಮಹತ್ವ ತಿಳಿಸಿದರು.

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಯೋಗ ಪ್ರದರ್ಶನ

ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ ಆವರಣದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಪ್ರದರ್ಶಿಸಿದರು.

ಅಂತರರಾಷ್ಟ್ರೀಯ ಯೋಗ ದಿನ: ಆರು ಸಾವಿರ ಜನರಿಂದ ಏಕಕಾಲಕ್ಕೆ ಹಂಪಿ ರಥಬೀದಿಯಲ್ಲಿ ಯೋಗ

ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಂಗಳೂರು ನಗರ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಆಯುಷ್, ಜೀವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತೋಟಗಾರಿಕಾ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಎಂಟನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮಾನ್ಯ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರು ಸಾಮಾನ್ಯ ಯೋಗ ಶಿಷ್ಟಾಚಾರ ಅಭ್ಯಾಸ ಪ್ರದರ್ಶಿಸಿದರು. ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಬಂದ ಸುಮಾರು ಇನ್ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಯೋಗ ಮಾಡುವ ಮೂಲಕ ಯೋಗದಿನಕ್ಕೆ ಚಾಲನೆ ನೀಡಿದ ಸಚಿವ ಎಂ.ಟಿ.ಬಿ ನಾಗರಾಜ್ 

ಚಿಕ್ಕಬಳ್ಳಾಪುರ:  ತಾಲ್ಲೂಕಿನ ಇತಿಹಾಸಿಕ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಯೋಗ ಮಾಡುವ ಮೂಲಕ ಯೋಗ ದಿನಕ್ಕೆ ಚಾಲನೆ ನೀಡಿದರು

ಕಿತ್ತೂರು ಕೋಟೆ ಆವರಣದಲ್ಲಿ ಯೋಗ ಪ್ರದರ್ಶನ

ಚನ್ನಮ್ಮನ ಕಿತ್ತೂರು(ಬೆಳಗಾವಿ ಜಿಲ್ಲೆ): ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಮಂಗಳವಾರ ಯೋಗ ದಿನ ಆಚರಿಸಲಾಗುತ್ತಿದೆ. ಈ ಪೈಕಿ ಒಂದಾಗಿರುವ
ಚನ್ನಮ್ಮ ಕಿತ್ತೂರು ಕೋಟೆ ಆವರಣದಲ್ಲೂ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗಣ್ಯರು ಯೋಗ ಪ್ರದರ್ಶಿಸಿ ಗಮನ ಸೆಳೆದರು.
ರಾಜಗುರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ, ಶಾಸಕ ಮಹಾಂತೇಶ ದೊಡ್ಡಗೌಡರ ಇತರರಿದ್ದರು.

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಸೈನಿಕರು ಯೋಗಾಭ್ಯಾಸ

ವಿಶ್ವ ಯೋಗ ದಿನದ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಸೈನಿಕರು ಯೋಗಾಭ್ಯಾಸ ಮಾಡುತ್ತಿರುವ ದೃಶ್ಯ ಕಂಡುಬಂತು

ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ ಆವರಣದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ಪ್ರದರ್ಶಿಸಿದರು.

ಕಲಬುರಗಿ |: ಯೋಗ ದಿನಾಚರಣೆ ಶರಣಬಸವೇಶ್ವರ ದೇವಸ್ಥಾನದಲ್ಲಿ ಯೋಗಾಸನ

ಜಗತ್ತಿಗೆ ಯೋಗದ ಮಹತ್ವ ತಿಳಿಸಿದ ಮೋದಿ: ಶೆಟ್ಟರ್

ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಸಾಮೂಹಿಕ ಯೋಗಾಭ್ಯಾಸ ನಡೆಯಿತು.

ಬೀದರ್: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ್:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ. ಜಿಲ್ಲಾ ಆಯುಷ್ಯ ಇಲಾಖೆ  ಹಾಗೂ  ಯೋಗ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಇಲ್ಲಿಯ ಕೋಟೆ ಆವರಣದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆರಂಭವಾಗಿದೆ.  ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು ಚಾಲನೆ ನೀಡಿದರು.
ವಿದ್ಯಾರ್ಥಿಗಳು, ಯೋಗ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದಾ

ಮೈಸೂರು: ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಿರತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್.

ಮೈಸೂರು: ಅರಮನೆ ಆವರಣದಲ್ಲಿ ಯೋಗಾಭ್ಯಾಸ ನಿರತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್.

ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಯೋಗಾಭ್ಯಾಸ ಮಾಡಿದರು.

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಯೋಗಾಭ್ಯಾಸ

ಚಿತ್ರದುರ್ಗದ ಚಂದ್ರವಳ್ಳಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿಯಲ್ಲಿ ಯೋಗ ದಿನಾಚರಣೆ

ಮಡಿಕೇರಿ: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಲ್ಲಿನ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ  500 ಕ್ಕೂ ಅಧಿಕ ಯೋಗಾಭ್ಯಾಸಿಗಳಿಂದ ಯೋಗಾಭ್ಯಾಸ ನಡೆಯಿತು‌.

ಐತಿಹಾಸಿಕ ಕಲ್ಲಿನಕೋಟೆಯಲ್ಲಿ ಯೋಗ ಪದರ್ಶನ

ಚಿತ್ರದುರ್ಗ: ಇಲ್ಲಿನ ಐತಿಹಾಸಿಕ ಕಲ್ಲಿನ ಕೋಟೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ ಯೋಗ ಪ್ರದರ್ಶಿಸಲಾಯಿತು.

ಚಾಮರಾಜನಗರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಚಾಮರಾಜನಗರ: ಇಲ್ಲಿನ ಐತಿಹಾಸಿಕ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ  ಜಿಲ್ಲಾಡಳಿತದ ವತಿಯಿಂದ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ನಡೆಯಿತು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿ.ಪಂ. ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಡಿಎಚ್ ಒ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಸಾರ್ವಜನಿಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

ಯೋಗ ದಿನಾಚರಣೆ: ಶರಣಬಸವೇಶ್ವರ ದೇವಸ್ಥಾನದಲ್ಲಿ ಯೋಗಾಸನ

ಕಲಬುರಗಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಯೋಗಾಸನ ನಡೆಯುತ್ತಿದೆ.

ಮಡಿಕೇರಿಯಲ್ಲಿ ದಟ್ಟವಾಗಿ ಕವಿದಿರುವ ಮಂಜು, ಬೀಳುತ್ತಿರುವ ಜಿಟಿಜಿಟಿ ಮಳೆಯ ನಡುವೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.

ಚಿಕ್ಕಮಗಳೂರು: ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಯೋಗಾಭ್ಯಾಸ ನಡೆಯುತ್ತಿದೆ. ಆಯುಷ್ ಅಧಿಕಾರಿ ಡಾ.ಗೀತಾ, ಶಾಸಕ ಸಿ.ಟಿ.ರವಿ, ಇತರರು ಯೋಗಾಭ್ಯಾಸದಲ್ಲಿ ತೊಡಗಿದ್ದಾರೆ.

ಹುಬ್ಬಳ್ಳಿಯ ಶ್ರೇಯಸ್ ನಗರದ ಶ್ರೇಯಸ್ ಸಮುದಾಯ ಭವನದಲ್ಲಿ ದಿವ್ಯಚೇತನ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಯೋಗಾಭ್ಯಾಸ ನಡೆಯಿತು.

ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಇಟಗಿ ಮಹಾದೇವ ‌ದೇವಾಲಯದಲ್ಲಿ ಯೋಗ ಕಾರ್ಯಕ್ರಮ

ಬೀದರ್ ನ ಕೋಟೆ ಆವರಣಲ್ಲಿ ಯೋಗ ಕಾರ್ಯಕ್ರಮ ಆರಂಭವಾಗಿದೆ

ಜಿಮ್ಖಾನ ಮೈದಾನದಲ್ಲಿ ಸಾಮೂಹಿಕ ಯೋಗ

ಹುಬ್ಬಳ್ಳಿ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದ ಸಹಯೋಗದಲ್ಲಿ  ದೇಶಪಾಂಡೆ ನಗರದ ಜಿಮ್ಖಾನ ಮೈದಾನದಲ್ಲಿ ಮಂಗಳವಾರ, ಯೋಗ ಗುರು ವಿನಾಯಕ ತಲಗೇರಿ ನೇತೃತ್ವದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು.

 ಕ್ಷಮಾತಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹಾಗೂ ಸ್ಥಳೀಯ ಪಾಲಿಕೆ ಸದಸ್ಯರುಗಳು, ವೈದ್ಯರುಗಳು, ವಕೀಲರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಪಂಪಾಪತಿ ದೇವಸ್ಥಾನ ಸಮೀಪ ನಡೆಯುತ್ತಿರುವ ಯೋಗ

ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 15 ಸಾವಿರ ಜನರೊಂದಿಗೆ ಯೋಗ ಮಾಡಲು ಮೈಸೂರಿಗೆ ಆಗಮಿಸಿದ್ದಾರೆ.

ಮಡಿಕೇರಿಯ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಯೋಗಾಭ್ಯಾಸ

ವಿಶ್ವ ವಿಖ್ಯಾತ ಗೋಳಗುಮ್ಮಟ ಆವರಣದಲ್ಲಿ  ಯೋಗ ಪ್ರದರ್ಶನ

ವಿಜಯಪುರ: ನಗರದ ವಿಶ್ವ ವಿಖ್ಯಾತ ಗೋಳಗುಮ್ಮಟ ಆವರಣದಲ್ಲಿ ಆಯುಷ್ ಇಲಾಖೆ,  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ವಿಶ್ವ ಯೋಗ ದಿನ ಆಯೋಜಿಸಲಾಗಿದೆ

ಕೊಪ್ಪಳ ‌ಜಿಲ್ಲಾಡಳಿತ ವತಿಯಿಂದ ‌ಎರಡು ಕಡೆ ಯೋಗ ದಿನಾಚರಣೆ

ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಯೋಗ ಅಭ್ಯಾಸ ಮಾಡಲಾಯಿತು

ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಇಟಗಿ.ಮಹಾದೇವ ‌ದೇವಾಲಯದಲ್ಲಿ ಯೋಗ ಕಾರ್ಯಕ್ರಮ

ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ ಯೋಗ

ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ 'ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ'  ಮತ್ತು 'ಬೆಂಗಳೂರು ವಕೀಲರ ಸಂಘ' ಮಂಗಳವಾರ ಜಂಟಿಯಾಗಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ   ಋತುರಾಜ್ ಅವಸ್ಥಿ ಸೇರಿದಂತೆ ನ್ಯಾಯಮೂರ್ತಿಗಳು ಯೋಗಾಭ್ಯಾಸ ಮಾಡಿದರು -ಪ್ರಜಾವಾಣಿ ಚಿತ್ರ

ಅಂತರರಾಷ್ಟ್ರೀಯ ಯೋಗ ದಿನ | ಯೋಗದಿಂದ ನಿರೋಗ ಸಾಧ್ಯ; ಮೈಸೂರಿನಲ್ಲಿ ಪ್ರಧಾನಿ ಮೋದಿ

ಆರೋಗ್ಯಯುತ ಜೀವನ ನಡೆಸಲು ಯೋಗ ಬಹುದೊಡ್ಡ‌ ಅಸ್ತ್ರ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ

ಬಾಗಲಕೋಟೆ: ಕೋವಿಡ್ ಸೇರಿದಂತೆ‌ ವಿವಿಧ ರೋಗಗಳನ್ನು ಎದುರಿಸಿ, ಆರೋಗ್ಯಯುತ ಜೀವನ ನಡೆಸಲು ಯೋಗ ಬಹುದೊಡ್ಡ‌ ಅಸ್ತ್ರವಾಗಿದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ ಹೇಳಿದರು.

ಮಂಗಳವಾರ ಪಟ್ಟದಕಲ್ಲಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಜಾದಿ ಕಿ ಅಮೃತ ಮಹೋತ್ಸವ ಅಂಗವಾಗಿ ದೇಶದ 75 ಐತಿಹಾಸಿಕ ಸ್ಥಳಗಳಲ್ಲಿ ಆಯೋಜಿಸಿರುವ ಯೋಗ ಶಿಬಿರಗಳಲ್ಲಿ ಪಟ್ಟದಕಲ್ಲು ಒಂದಾಗಿದೆ ಎಂದರು.

ಹುಬ್ಬಳ್ಳಿಯ ಶ್ರೇಯಸ್ ನಗರದ ಶ್ರೇಯಸ್ ಸಮುದಾಯ ಭವನದಲ್ಲಿ ದಿವ್ಯಚೇತನ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಯೋಗಾಭ್ಯಾಸ ನಡೆಯಿತು

ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಯೋಗ ಅಭ್ಯಾಸ ಮಾಡಲಾಯಿತು

ಅಂತರರಾಷ್ಟ್ರೀಯ ಯೋಗ ದಿನಕ್ಕೆ ಶುಭಾಶಯ ಕೋರಿದ ಮೋದಿ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು ದೇಶದ ಜನರಿಗೆ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ಹೇಳಿದರು. 

ನಮ್ಮ ಬದುಕಿಗೆ ವಿಶ್ವಾಸ ತುಂಬಿರುವುದೇ ಯೋಗ. ಇಡೀ ವಿಶ್ವಕ್ಕೆ ಪಸರಿಸಿರುವ ಯೋಗದಿಂದಲೇ ಶಾಂತಿ, ನೆಮ್ಮದಿಯ ಜತೆಗೆ ದೇಶಗಳ ನಡುವಿನ ಬಾಂಧವ್ಯಕ್ಕೆ ನಾಂದಿ ಹಾಡಿದೆ.

ಅಂತರಾಷ್ಟ್ರೀಯ ಯೋಗ ದಿನ: ಮೈಸೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ

ಚಿಕ್ಕಮಗಳೂರು: ಯೋಗ ದಿನಾಚರಣೆ ಅಂಗವಾಗಿ

ಚಿಕ್ಕಮಗಳೂರು: ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಯೋಗಾಭ್ಯಾಸ ನಡೆಯುತ್ತಿದೆ.
ಆಯುಷ್ ಅಧಿಕಾರಿ ಡಾ.ಗೀತಾ, ಶಾಸಕ ಸಿ.ಟಿ.ರವಿ, ಇತರರು ಯೋಗಾಭ್ಯಾಸದಲ್ಲಿ ತೊಡಗಿದ್ದಾರೆ

ಮೈಸೂರು: ಅರಮನೆ ಸುತ್ತಮುತ್ತಲೂ ಜನ

ಮೈಸೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ನಡೆಯುತ್ತಿದ್ದು, ಪಾಸ್ ಇರುವವರಿಗೆ ಮಾತ್ರವೇ ಪ್ರವೇಶ ಅವಕಾಶ ನೀಡಲಾಗಿದೆ.

ಪಾಸ್‌ ಇಲ್ಲದ ನೂರಾರು‌ ಮಂದಿ ಅರಮನೆಯ ಸುತ್ತಲಿನ ದ್ವಾರಗಳ ಬಳಿ‌ ನಿಂತಿದ್ದಾರೆ. ಕೆಲವರು ಯೋಗಾಭ್ಯಾಸಿಗಳು ಮೋದಿ ಜೊತೆ ಯೋಗ ಮಾಡುವ ಆಸೆಯಿಂದ ಬಂದಿದ್ದಾರೆ. ಆದರೆ, ಅವರ ಬಳಿ ಪಾಸ್ ಇಲ್ಲದ ಕಾರಣದಿಂದ ಪೊಲೀಸರು ಪ್ರವೇಶಕ್ಕೆ ಅವಕಾಶ ಕೊಡುತ್ತಿಲ್ಲ.

ಹೊಸಪೇಟೆಯಲ್ಲಿ ಕೇಂದ್ರಸಚಿವ ಪ್ರಹ್ಲಾದ್ ಜೋಶಿ ಅವರು ಮಡಕೆಯಲ್ಲಿ ಧಾನ್ಯ ಸುರಿದು ಯೋಗ ದಿನಕ್ಕೆ ಚಾಲನೆ ನೀಡಿದರು

ಪಟ್ಟದಕಲ್ಲಿನಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮ

ಬಾಗಲಕೋಟೆ: ಪಟ್ಟದಕಲ್ಲಿನಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸ್ಥಳೀಯರಿಗೆ‌ ಅವಕಾಶ‌ ನೀಡದ್ದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ಬಾಗಲಕೋಟೆ | ಗ್ರಾಮಸ್ಥರಿಗೆ ನಿರಾಕರಣೆ; ಪ್ರತಿಭಟನೆ

ಬಾಗಲಕೋಟೆ: ಬಿಳಿ ಸಮವಸ್ತ್ರ ಧರಿಸಿ ಬಂದಿಲ್ಲ ಎಂದು ಪಟ್ಟದಕಲ್ಲಿನಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮಕ್ಕೆ ಸ್ಥಳೀಯ ನಿವಾಸಿಗಳಿಗೆ ಅವಕಾಶ‌ ನಿರಾಕರಿಸಿದ್ದಕ್ಕೆ ಪ್ರತಿಭಟನೆ ಮಾಡಿದರು.

ಗ್ರಾಮದಲ್ಲಿ ಡಂಗುರ ಹೊಡೆದು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಲಾಗಿತ್ತು. ಆದರೆ, ಈಗ ಬಿಳಿ ಟೀ ಶರ್ಟ್ ಧರಿಸಿ ಬಂದಿಲ್ಲ ಎಂದು ಒಳಗೆ ಬಿಡುತ್ತಿಲ್ಲ ಎಂದು ನಿವಾಸಿ ಮಂಜುನಾಥ ಮತ್ತಿತರರು ದೂರಿದರು. ಬಿಳಿ ಸಮವಸ್ತ್ರ ಧರಿಸಿ ಬಂದವರನ್ನು ಮಾತ್ರ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

ಅಂತರರಾಷ್ಟ್ರೀಯ ಯೋಗ ದಿನ: ಪ್ರಧಾನಿ ಯೋಗಾಭ್ಯಾಸ ಮಾಡುವ ನೇರ ಪ್ರಸಾರ

ಮಡಿಕೇರಿ: 620 ಮಂದಿ ಯೋಗ ದಿನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಮಡಿಕೇರಿ: ದಟ್ಟವಾಗಿ ಕವಿದಿರುವ ಮಂಜು, ಬೀಳುತ್ತಿರುವ ಜಿಟಿಜಿಟಿ ಮಳೆಯ ನಡುವೆ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾತ್ರಿ ಇಡಿ ಜಿಟಿಜಿಟಿ ಮಳೆಯಾಗಿದ್ದು, ನಸುಕಿನಿಂದಲೇ ಭಾರಿ ಮಂಜು ಕವಿದಿದೆ. ಯೋಗಾಭ್ಯಾಸಿಗಳ ಒತ್ತಾಯ ಹಾಗೂ ಮಳೆಯ ಮುನ್ಸೂಚನೆಯ ಮೇರೆಗೆ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೆಳಗಿನ ಗೌಡ ಸಮಾಜದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 620 ಮಂದಿ ಯೋಗ ದಿನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ನಾಡಗೀತೆಯೊಂದಿಗೆ ಹಂಪಿಯಲ್ಲಿ ಕಾರ್ಯಕ್ರಮ ಆರಂಭ.

ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲಿನಲ್ಲಿ ವಿಶ್ವ ಯೋಗ ದಿನ ಅಂಗವಾಗಿ ಯೋಗದಲ್ಲಿ ತೊಡಗಿರುವುದು

ಹಂಪಿಯಲ್ಲಿ ಯೋಗ ದಿನಕ್ಕೆ ಕ್ಷಣಗಣನೆ

ಹೊಸಪೇಟೆ (ವಿಜಯನಗರ): ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಹಂಪಿಯಲ್ಲಿ ಕ್ಷಣಗಣನೆ ಆರಂಭವಾಗಿದೆ.
ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಹಂಪಿಗೆ ಬಂದಿದ್ದಾರೆ. ಎದುರು ಬಸವಣ್ಣ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಗಣ್ಯರು ಬಂದ ನಂತರ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗಾಭ್ಯಾಸ ಮಾಡಲು ಸೇರಿರುವ ಜನರು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗಾಭ್ಯಾಸ ಮಾಡಲು ಅರಮನೆ ಆವರಣದಲ್ಲಿ ಬೆಳಗಿನ ಜಾವದಿಂದಲೇ ಬರಲಾರಂಭಿಸಿದ ಅಭ್ಯಾಸಿಗಳು.  ಅರಮನೆಯ ಇಡೀ ಆವರಣ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.