ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳು, ಸುಪ್ರೀಂ ಕೋರ್ಟ್‌ನಲ್ಲಿರುವ ದಾವೆಗಳ ಕುರಿತಂತೆ ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಶುಕ್ರವಾರ (ಫೆ.26) ನಡೆಯಲಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಕೂಡಾ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.