ಎಂ.ಬಿ. ಪಾಟೀಲ
– ಫೇಸ್‌ಬುಕ್ ಚಿತ್ರ
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್‌ವೆಸ್ಟ್ ಕರ್ನಾಟಕ– 2025’ಕ್ಕೆ ಆತಿಥ್ಯ ವಹಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ನಾಲ್ಕು ದಿನಗಳ ಹೂಡಿಕೆ ಉತ್ಸವದ ಉದ್ಘಾಟನೆ ಮಂಗಳವಾರ (ಫೆ. 11) ನಡೆಯಲಿದೆ.
‘ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಈ ಸಮಾವೇಶವು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
‘ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಈ ಸಮಾವೇಶವು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ’ ಎಂದೂ ಅವರು ಹೇಳಿದ್ದಾರೆ.
ಸಮಾವೇಶದ ಕಾರ್ಯಕ್ರಮಗಳ ವಿವರಗಳಿಗೆ https://investkarnataka.co.in/gim2025/events-schedule/ ಭೇಟಿ ನೀಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.