ಬೆಂಗಳೂರು: ಸಂಪನ್ಮೂಲ ಸಾಮರ್ಥ್ಯಕ್ಕೆ ಅನುಗುಣವಾಗಿ ಕರ್ನಾಟಕದ ಎರಡನೇ ಸ್ತರದ ನಗರಗಳಲ್ಲೂ ಹೂಡಿಕೆ ಉತ್ತೇಜಿಸಿದರೆ ರಾಜ್ಯದ ಒಟ್ಟಾರೆ ಪ್ರಗತಿ ಸಾಧ್ಯವಾಗಲಿದೆ ಎಂದು ‘ಟರ್ಬೊಸ್ಟಾರ್ಟ್ ಗ್ಲೋಬಲ್ʼ ಸಿಇಒ ವೆಂಕಟ್ ರಾಜು ಅಭಿಪ್ರಾಯಪಟ್ಟರು.
‘ಬೆಳವಣಿಗೆಗೆ ಹೂಡಿಕೆಯ ಮರುಕಲ್ಪನೆ: ಕರ್ನಾಟಕದ ಕನಸು 2030 ಸಾಧಿಸಲು ಪೂರಕ ಐದು ವಲಯಗಳು’ ಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಪಾರದರ್ಶಕತೆ, ಸ್ಥಿರತೆ ಹಾಗೂ ಮುಂದುವರಿಕೆಯಂತಹ ವಾತಾವರಣ ನಿರ್ಮಾಣವಾದಲ್ಲಿ ಉದ್ಯಮಿಗಳು ಹೂಡಿಕೆಗೆ ಮುಂದೆ ಬರುವುದು ನಿಶ್ಚಿತ. ಉತ್ಪಾದನಾ ವಲಯ ಮತ್ತು ಪೂರೈಕೆ ಸರಪಳಿ ನಡುವೆ ಸಮತೋಲನ ಸಾಧಿಸಬೇಕಿದೆ ಎಂದರು.
‘ಹಸಿರು ಇಂಧನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಸ್ವಿಟ್ಜರ್‌ಲೆಂಡ್ ಕಂಪನಿಗಳು ಆಸಕ್ತಿ ತೋರಿವೆ’ ಎಂದು ಉಡುಪಿಯವರಾದ, ಸ್ವಿಟ್ಜರ್‌ಲೆಂಡ್ ಸಂಸದ ಎಚ್.ಸಿ. ನಿಕ್ ಗುಗ್ಗರ್ ಹೇಳಿದರು.
ಐಬಿಸಿ (ಇಂಟರ್‌ನ್ಯಾಷನಲ್ ಬ್ಯಾಟರಿ ಕಂಪನಿ) ಸಿಇಒ ಪ್ರಿಯದರ್ಶಿ ಪಾಂಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.