ADVERTISEMENT

ಅಮೆಜಾನ್, ಫ್ಲಿಪ್‌ಕಾರ್ಟ್‌ ವಿರುದ್ಧ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 19:17 IST
Last Updated 11 ಜೂನ್ 2021, 19:17 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ವಿರುದ್ಧ ಭಾರತೀಯ ಸ್ಪರ್ಧಾ ಆಯೋಗ(ಸಿಸಿಐ) ಆದೇಶಿಸಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಸ್ಪರ್ಧಾತ್ಮಕ ವಿರೋಧಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ –2020 ಅನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿದೆ.

ತನಿಖೆಗೆ ಆದೇಶಿಸಿರುವುದು ತರ್ಕಬದ್ಧವಾಗಿದೆ. ತನಿಖೆಗೆ ತಡೆ ನೀಡುವುದು ಪೂರ್ವಗ್ರಹ ಆಗಲಿದೆ ಎಂದು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ದೆಹಲಿಯ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಂಘಟನೆಯಾದ ದೆಹಲಿ ವ್ಯಾಪಾರ ಮಹಾಸಂಘದ ಮಾಹಿತಿ ಆಧರಿಸಿ ಈ ತನಿಖೆಗೆ ಸಿಸಿಐ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು 2020 ಜನವರಿ 13ರಂದು ಅರ್ಜಿ ಸಲ್ಲಿಸಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.