ADVERTISEMENT

ಐರನ್ ಮ್ಯಾನ್ ಆದ ಮಾಜಿ ಐಪಿಎಸ್, ಬಿಜೆಪಿ ನಾಯಕ ಅಣ್ಣಾಮಲೈ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 15:56 IST
Last Updated 9 ನವೆಂಬರ್ 2025, 15:56 IST
   

ಬೆಂಗಳೂರು: ಗೋವಾದಲ್ಲಿ ನಡೆದ ಐರನ್‌ಮ್ಯಾನ್‌ 70.3 ಓಟದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಎರಡನೇ ಬಾರಿ ಭಾಗಿಯಾಗಿ ಸ್ಪರ್ಧೆ ಪೂರ್ಣಗೊಳಿಸಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ಈ ಐರನ್‌ಮ್ಯಾನ್ 70.3ನಲ್ಲಿ ಭಾಗಿಯಾಗಿ ಸ್ಪರ್ಧೆ ಪೂರ್ಣಗೊಳಿಸಿದ್ದಾರೆ.

ಸ್ಪರ್ಧೆಯು, 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟ ಒಳಗೊಂಡಿತ್ತು. ಇದನ್ನು ತೇಜಸ್ವಿ ಸೂರ್ಯ ಅವರು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. 

ADVERTISEMENT

ಮೊದಲ ಬಾರಿ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಅಣ್ಣಾಮಲೈ ಅವರು 8 ಗಂಟೆ 13 ನಿಮಿಷಗಳಲ್ಲಿ ಸ್ಪರ್ಧೆಯ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ತೇಜಸ್ವಿ ಸೂರ್ಯ ಅವರು ಅಣ್ಣಾಮಲೈ ಜತೆಗಿನ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ. ‘ಅಣ್ಣಾಮಲೈ ಅವರೊಂದಿಗೆ ಭಾಗವಹಿಸಿದ್ದರಿಂದ ನನ್ನ ಎರಡನೇ ಐರನ್‌ಮ್ಯಾನ್ 70.3 ಗೆ ಒಂದು ಬಲವಾದ ಮುಕ್ತಾಯ ಸಿಕ್ಕಿದೆ. ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ #FitIndia ಕರೆ ಯುವಕರಲ್ಲಿ ಆರೋಗ್ಯ, ಶಿಸ್ತು ಮತ್ತು ದೃಢ ಸಂಕಲ್ಪದ ಅಲೆಯನ್ನು ಪ್ರೇರೇಪಿಸುತ್ತಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.