ಬೆಂಗಳೂರು: ‘ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ ನೀಡಿ ಐದು ವರ್ಷಗಳಾದರೂ ಸರ್ಕಾರ ಪಾಲನೆ ಮಾಡಿಲ್ಲ’ ಎಂದು ಆಕ್ಷೇಪಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿ ದಾಖಲಿಸಿಕೊಂಡಿದೆ.
ಈ ಸಂಬಂಧ ಹೈಕೋರ್ಟ್ ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ರಿಟ್ ಅರ್ಜಿ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.
ಕೆಲ ಕಾಲ ವಿಚಾರಣೆ ವೇಳೆ ಆಲಿಸಿದ ನ್ಯಾಯಪೀಠ, ‘ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ವಿಷಯ ಸಾರ್ವಜನಿಕ ಮಹತ್ವದ್ದಾಗಿದೆ. ಆದ್ದರಿಂದ, ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿ ಸಂಬಂಧಿಸಿದ ನ್ಯಾಯಪೀಠದ ಮುಂದಿರಿಸಬೇಕು’ ಎಂದು ಹೈಕೋರ್ಟ್ ರಿಜಿಸ್ಟ್ರಾರ್
ಜನರಲ್ ಅವರಿಗೆ ನಿರ್ದೇಶನ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.