ADVERTISEMENT

ಮುಂಬೈನಲ್ಲಿ ಮೃತಪಟ್ಟ ವ್ಯಕ್ತಿಯ ರಹಸ್ಯ ಅಂತ್ಯಕ್ರಿಯೆಗೆ ಸಚಿವ ನಾರಾಯಣಗೌಡ ಸಹಾಯ?

​ಪ್ರಜಾವಾಣಿ ವಾರ್ತೆ
Published 1 ಮೇ 2020, 11:35 IST
Last Updated 1 ಮೇ 2020, 11:35 IST
   

ಮಂಡ್ಯ: ಮುಂಬೈನಲ್ಲಿ ಮೃತಪಟ್ಟ ಸೋಂಕು ಶಂಕಿತವ್ಯಕ್ತಿಯ ಶವವನ್ನು ಪಾಂಡವಪುರ ತಾಲ್ಲೂಕಿನ ಬಿ.ಕೊಡಗಳ್ಳಿ ಗ್ರಾಮಕ್ಕೆ ಆಂಬುಲೆನ್ಸ್‌ ಮೂಲಕ ಸಾಗಿಸಲಾಗಿದ್ದು, ರಹಸ್ಯವಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸದ್ಯ ಶವ ಸಾಗಿಸಿದ ಕುಟುಂಬದ ನಾಲ್ವರಿಗೆ ಸೋಂಕು ತಗುಲಿದೆ. ಸಾಗಾಟ, ರಹಸ್ಯಅಂತ್ಯಕ್ರಿಯೆಗೆ ಸಚಿವ ನಾರಾಯಣಗೌಡ ನೆರವಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಹಾಯದಿಂದ ಮೃತ ವ್ಯಕ್ತಿಯ ಕುಟುಂಬ ಸದಸ್ಯರು ರಹಸ್ಯವಾಗಿ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಲಾಕ್‌ಡೌನ್‌ ಘೋಷಣೆಯಾದ ನಂತರವೂ ಮುಂಬೈನಿಂದ ಕೆ.ಆರ್‌.ಪೇಟೆ, ನಾಗಮಂಗಲ ತಾಲ್ಲೂಕಿಗೆ ಹಲವು ಬಸ್‌ಗಳು ಬಂದಿವೆ. ಸಚಿವರೇ ಬಸ್‌ ವ್ಯವಸ್ಥೆ ಮಾಡಿಸಿದ್ದಾರೆ.ವಲಸಿಗರನ್ನು ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ADVERTISEMENT

ಸಚಿವರನ್ನು ಸಂಪರ್ಕಿಸಿದಾಗ ಅವರ ಮೊಬೈಲ್‌ ಸ್ಥಗಿತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.