ADVERTISEMENT

ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿಯೇ? ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 16:25 IST
Last Updated 9 ಜೂನ್ 2025, 16:25 IST
<div class="paragraphs"><p>ಎಚ್‌ಡಿಕೆ, ಸಿದ್ದರಾಮಯ್ಯ </p></div>

ಎಚ್‌ಡಿಕೆ, ಸಿದ್ದರಾಮಯ್ಯ

   

ಬೆಂಗಳೂರು: ಸಿದ್ದರಾಮಯ್ಯ ಅವರು ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ವಿಧಾನಸೌಧ ಮೆಟ್ಟಿಲುಗಳ ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅಲ್ಲಿ ಯಾರೂ ಸತ್ತಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕದ ಮುಖ್ಯಮಂತ್ರಿ ಅಲ್ಲವೇ? ದುರಂತದ ಹೊಣೆಯನ್ನು ಪೊಲೀಸರ ಮೇಲೆ ಹಾಕಿ ಕೈತೊಳೆದುಕೊಳ್ಳುವುದು ಎಷ್ಟು ಸರಿ ಎಂದಿದ್ದಾರೆ.

ADVERTISEMENT

ಘಟನೆಗೆ ಹೊಣೆ ಹೊತ್ತುಕೊಳ್ಳುವ ಬದಲು ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರ ಮಾಡುತ್ತಿದ್ದಾರೆ. ಅವರನ್ನು 'ಮೆಟ್ಟಿಲು ಮುಖ್ಯಮಂತ್ರಿ’ ಎಂದೇ ಕರೆಯಬೇಕಿದೆ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.