ADVERTISEMENT

ಕೋವಿಡ್ ಲಸಿಕೆಗೆ ಕಾಲಮಿತಿ ನಿಗದಿ ಮಾಡಲಾಗಿದೆಯೇ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 19:31 IST
Last Updated 28 ಜುಲೈ 2021, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯ ಎಲ್ಲ ಜನರಿಗೂ ಕೋವಿಡ್ ಲಸಿಕೆ ನೀಡಲು ಕಾಲಮಿತಿ ನಿಗದಿ ಮಾಡಿಕೊಳ್ಳಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಲಸಿಕಾ ಅಭಿಯಾನದ ಕುರಿತು ಸರ್ಕಾರ ಸಲ್ಲಿಸಿದ ಅಂಕಿ–ಅಂಶ ಪರಿಶೀಲಿಸಿತು. ಜುಲೈ ಮತ್ತು ಆಗಸ್ಟ್‌ನಲ್ಲಿ ಎರಡನೇ ಡೋಸ್‌ಗೆ ಬರಲಿರುವ ಜನರಿಗೆ ಸಾಕಾಗುವಷ್ಟು ಲಸಿಕೆ ಲಭ್ಯವಿದೆ ಎಂಬುದನ್ನು ಪೀಠ ಗಮನಿಸಿತು.

ಶಾಲೆ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ನಿಯಮಿತವಾಗಿ ನೀಡುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಪದಾರ್ಥಗಳನ್ನು ನೀಡುವ ಕಾರ್ಯಕ್ರಮ ಮತ್ತೆ ಆರಂಭಿಸಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಕಾಲೇಜು ತೆರೆಯಲು ಅನುಮತಿ ನೀಡಲಾಗಿದೆ. ಆದರೆ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆಯೇ ಎಂಬುದರ ಕುರಿತು ದಾಖಲೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತು.

ADVERTISEMENT

ಕೋವಿಡ್ ಸೋಂಕಿತರು ಸಲ್ಲಿಸುವ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕುಂದು ಕೊರತೆ ನಿವಾರಣಾ ವ್ಯವಸ್ಥೆಯನ್ನು
ಕೂಡಲೇ ಆರಂಭಿಸಬೇಕು ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.