ADVERTISEMENT

ಎಂಟು ಸ್ಥಾನ ಗೆಲ್ಲದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 12:39 IST
Last Updated 29 ನವೆಂಬರ್ 2019, 12:39 IST
   

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಬಿಜೆಪಿ ಎಂಟು ಸ್ಥಾನಗಳನ್ನು ಗೆಲ್ಲದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ, ಕಾಂಗ್ರೆಸ್‌ ಎಂಟು ಸ್ಥಾನ ಜಯಿಸದಿದ್ದರೆ ವಿರೋಧ ಪಕ್ಷದ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರಾ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ’ಬಿಜೆಪಿ ಎಂಟು ಸ್ಥಾನಗಳನ್ನು ಗೆಲ್ಲದಿದ್ದರೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಸವಾಲು ಹಾಕುವ ಮೊದಲು ಅವರು ಪಕ್ಷದಲ್ಲಿ ತಮ್ಮ ಸ್ಥಾನ ಏನೆಂಬುದನ್ನು ಅರಿತುಕೊಳ್ಳಲಿ‘ ಎಂದರು.

ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಈಶ್ವರಪ್ಪ ‘ಉಪ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಎಲ್ಲ ಕಡೆ ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಭ್ರಮೆ ಎನ್ನಬೇಕೋ, ಹಗಲುಗನಸು ಎನ್ನಬೇಕೋ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಹುಚ್ಚ, ಸದಾ ಅಧಿಕಾರಕ್ಕೆ ಹಂಬಲಿಸುವ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನದ ಹುಚ್ಚಿನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ‘ ಎಂದು ಟೀಕಿಸಿದರು.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಅಪ್ಪನನ್ನೇ ಗೆಲ್ಲಿಸಲು ಸಾಧ್ಯವಾಗದ ಕುಮಾರಸ್ವಾಮಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುತ್ತಾರಾ? ಎಂದು ಈಶ್ವರಪ್ಪ ವ್ಯಂಗವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.