ಇಸ್ರೇಲ್‌ನಲ್ಲಿರುವ ಕನ್ನಡಿಗರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದರು
ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದು, ಯೋಗಕ್ಷೇಮ ವಿಚಾರಿಸಿದ್ದಾರೆ.
ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಶೀಘ್ರವೇ ವಾಪಸ್ ಕರೆಸಿಕೊಳ್ಳುವ ಕುರಿತು ವಿದೇಶಾಂಗ ಸಚಿವಾಲಯದ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿರುವುದಾಗಿ ಎಚ್‌ಡಿಕೆ ಭರವಸೆ ನೀಡಿದ್ದಾರೆ.
ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದ ಕನ್ನಡಿಗರು ಮಾತನಾಡಿ, ‘ನಾವು ತಾವು ಸುರಕ್ಷಿತರಾಗಿದ್ದೇವೆ. ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ. ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಕಠಿಣ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳ ಬದ್ಧತೆ ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಎಚ್‌ಡಿಕೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.