ADVERTISEMENT

ಐ.ಟಿ– ಬಿಜೆಪಿ ಮೈತ್ರಿ: ರಿಜ್ವಾನ್‌ ಆರೋಪ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 16:11 IST
Last Updated 11 ಏಪ್ರಿಲ್ 2019, 16:11 IST

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ’ ಎಂದು ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಗಂಭೀರ ಆರೋಪ ಮಾಡಿದರು.

ತಮ್ಮ ಚುನಾವಣಾ ಪ್ರಚಾರ ಕಚೇರಿ, ಆಪ್ತರ ಮನೆಗಳು ಮತ್ತು ಕಚೇರಿಗಳ ಮೇಲೆ ಗುರುವಾರ ಬೆಳಿಗ್ಗೆ ಐ.ಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೆ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ವಿರೋಧ ಪಕ್ಷಗಳ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಕಚೇರಿಗಳ ಮೇಲೆ ದಾಳಿ ನಡೆಸುವುದಷ್ಟೆ ಐ.ಟಿ ಅಧಿಕಾರಿಗಳ ಕೆಲಸವೇ. ಯಾವ ಆಧಾರದಲ್ಲಿ ಈ ದಾಳಿ ನಡೆಸಲಾಗುತ್ತಿದೆ’ ಎಂದು ಪ್ರಶ್ನಿಸಿದ ಅವರು, ‘ನನಗೆ ಪರಿಚಯವೇ ಇಲ್ಲದ ಕೆಲವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ನನಗೂ ಅವರಿಗೂ ಇರುವ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಾರೆ’ ಎಂದರು.

ADVERTISEMENT

‘15ರಿಂದ 50 ಮಂದಿಯ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ದಾಖಲೆಗಳಿಲ್ಲದ ಯಾವುದೂ ನಮ್ಮ ಬಳಿ ಇಲ್ಲ ಎನ್ನುವುದು ಅಧಿಕಾರಿಗಳಿಗೂ ಗೊತ್ತಿದೆ. ಆದರೆ, ನಮ್ಮ ಗಮನವನ್ನು ಬೇರೆಡೆಗೆ ಸೆಳೆದು ಪ್ರಚಾರಕ್ಕೆ ತಡೆ ಉಂಟುಮಾಡಲು ಅವರು ಈ ಕೆಲಸ ಮಾಡುತ್ತಿದ್ದಾರೆ’ ಎಂದೂ ರಿಜ್ವಾನ್‌ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.