ADVERTISEMENT

ಐ.ಟಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 19:50 IST
Last Updated 25 ಜುಲೈ 2019, 19:50 IST
   

ಬೆಂಗಳೂರು: ‘ನವದೆಹಲಿಯ ಮನೆಗಳಲ್ಲಿ ದೊರೆತ ₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂಬ ಕೋರಿಕೆಯನ್ನು ವಜಾ ಮಾಡಿದ್ದ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಶಾಸಕ ಡಿ.ಕೆ.ಶಿವಕುಮಾರ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಶಿವಕುಮಾರ್ ಪುನರ್ ಪರಿಶೀಲನಾ ಅರ್ಜಿ ದಾಖಲಿಸಿದ್ದು ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ನನ್ನ ಅರ್ಜಿಯನ್ನ ಕಳೆದ ತಿಂಗಳ 25ರಂದು ವಜಾ ಮಾಡಿರುವ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಕೋರ್ಟ್ ಆದೇಶ ಕಾನೂನು ಬಾಹಿರ’ ಎಂದು ಡಿ.ಕೆ.ಶಿವಕುಮಾರ್ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.