ADVERTISEMENT

ಗ್ಯಾರಂಟಿ ಬೇಕೋ, ಬೇಡವೋ ಜನರಿಗೆ ಬಿಟ್ಟ ವಿಚಾರ: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 11:22 IST
Last Updated 15 ಆಗಸ್ಟ್ 2024, 11:22 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಚಿಂತನೆ ನಡೆದಿಲ್ಲ. ಇದು ಜನರ ಅಭಿಪ್ರಾಯ ಅಷ್ಟೇ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ನಾನೇ ಹೇಳಿದ್ದೇನೆಂದು ಸುದ್ದಿ ಬರುತ್ತಿದೆ. ನಾನು ಆ ಮಾತು ಹೇಳಿಲ್ಲ. ಜನರ ಅಭಿಪ್ರಾಯದ ಮೇರೆಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಜನ ಗ್ಯಾರಂಟಿ ಇರಲಿ ಎಂದರೆ ಮುಂದುವರೆಯುತ್ತವೆ. ಅವರೇ ಬೇಡವೆಂದರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

‘ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಇರುತ್ತಾರೆ. ಬದಲಾವಣೆಯ ಸಂದರ್ಭವೇ ಬಂದಿಲ್ಲ. ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಾತ್ರ ಅದರಲ್ಲಿ ಏನೂ ಇರುವುದಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.