ADVERTISEMENT

ಖೋಡೆ ಸಮೂಹದ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 16:45 IST
Last Updated 9 ಫೆಬ್ರುವರಿ 2021, 16:45 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಮದ್ಯ ತಯಾರಿಕರಾಗಿರುವ ಖೋಡೆ ಸಮೂಹದ ಮೇಲೆ ಮಂಗಳವಾರ ದಾಳಿ ನಡೆಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ತೆರಿಗೆ ವಂಚನೆ ಮತ್ತು ಹಣಕಾಸು ವಹಿವಾಟುಗಳ ಕುರಿತು ಸಮರ್ಪಕ ದಾಖಲೆಗಳ ನಿರ್ವಹಣೆ ಮಾಡದಿರುವ ಆರೋಪಗಳಿಗೆ ಸಂಬಂಧಿಸಿದಂತೆ 15 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ಖೋಡೆ ಸಮೂಹದ ಮಾಲೀಕರ ಮನೆಗಳು, ಕಚೇರಿ, ಮದ್ಯ ತಯಾರಿಕಾ ಘಟಕ, ಕಂಪನಿ ಕಚೇರಿಗಳು ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯ 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಬೆಳಿಗ್ಗೆ 7ರಿಂದ ಕಾರ್ಯಾಚರಣೆ ಆರಂಭಿಸಿದ್ದು, ತಡ ರಾತ್ರಿಯವರೆಗೂ ಶೋಧ ಮುಂದುವರಿದಿತ್ತು.

ನಗರದ ಶೇಷಾದ್ರಿ ರಸ್ತೆಯಲ್ಲಿರುವ ಖೋಡೆ ಸಮೂಹದ ಮಾಲೀಕರ ಮನೆ, ಕಚೇರಿ, ಕೋಣನಕುಂಟೆಯಲ್ಲಿರುವ ಮದ್ಯ ತಯಾರಿಕಾ ಘಟಕ, ಖೋಡೇಸ್‌ ಬ್ರೀವರೀಸ್‌ ಕಚೇರಿಯಲ್ಲಿ ಶೋಧ ನಡೆಸಲಾಗಿದೆ. ತೆರಿಗೆ ವಂಚನೆ ಮತ್ತು ಹಣಕಾಸು ವಹಿವಾಟಿನ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ದೂರುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ವಶಕ್ಕೆ ಪಡೆದಿರುವ ದಾಖಲೆಗಳ ಪರಿಶೀಲನೆ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.