ಹುಬ್ಬಳ್ಳಿ: ವಾಣಿಜ್ಯ ನಗರಹುಬ್ಬಳ್ಳಿಯಲ್ಲಿ ಗುರುವಾರ 30ಕ್ಕೂ ಹೆಚ್ಚು ಬಟ್ಟೆ ಅಂಗಡಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಜೀಬಾನ್ ಪೇಟೆಯಲ್ಲಿರುವ ಗಂಗಾವತಿ ಸಿಲ್ಕ್ ಪ್ಯಾಲೇಸ್ ಹಾಗೂ ಎಸ್.ಟಿ.ಭಂಡಾರಿ ಸೇರಿದಂತೆ ವಿವಿಧ ಬಟ್ಟೆ ಅಂಗಡಿಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಗೋವಾ ಹಾಗೂ ಹುಬ್ಬಳ್ಳಿ ವಿಭಾಗದ 60ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಹಾಗೂ ನಕಲಿ ರಸೀದಿ ನೀಡಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.