ADVERTISEMENT

ಮಂಗಳೂರಲ್ಲಿ ಪ್ರತಿಷ್ಠಿತ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 9:11 IST
Last Updated 17 ಫೆಬ್ರುವರಿ 2021, 9:11 IST
   

ಮಂಗಳೂರು: ನಗರದ ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಐಟಿ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿದೆ.

ನಗರದ ಎ.ಜೆ. ಆಸ್ಪತ್ರೆ, ಯೆನೆಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಬಳಿಯ ಕಣಚೂರು ಆಸ್ಪತ್ರೆ, ಶ್ರೀನಿವಾಸ ಕಾಲೇಜು ಆಸ್ಪತ್ರೆಗಳ ಮಾಲೀಕರ ಮನೆ ಹಾಗೂ ಕಚೇರಿಗಳಿಗೆ ದಾಳಿ ‌ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.