ADVERTISEMENT

ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 13:44 IST
Last Updated 25 ಮಾರ್ಚ್ 2022, 13:44 IST
ಜಗದ್ಗುರು ರೇಣುಕಾಚಾರ್ಯ
ಜಗದ್ಗುರು ರೇಣುಕಾಚಾರ್ಯ    

ಬೆಂಗಳೂರು: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಈ ಸಂಬಂಧ ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ.

ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.