ADVERTISEMENT

ಕನಿಷ್ಠ ವೇತನ ಪರಿಷ್ಕರಣೆಗೆ ಸೂಚನೆ: ಜಗದೀಶ್‌ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 20:23 IST
Last Updated 29 ಫೆಬ್ರುವರಿ 2020, 20:23 IST
ಮಂಗಳೂರಿನಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಶನಿವಾರ ನಡೆದ ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಸಲ್ಲಿಸಿದ ಮನವಿಯನ್ನು ಪರಿಶೀಲಿಸುತ್ತಿರುವ ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌. ಸಂಸದ ನಳಿನ್‌ ಕುಮಾರ್‌ ಕಟೀಲ್ ಮತ್ತು ಶಾಸಕ ಡಾ.ವೈ.ಭರತ್‌ ಶೆಟ್ಟಿ ಜೊತೆಗಿದ್ದರು.– ಪ್ರಜಾವಾಣಿ ಚಿತ್ರ
ಮಂಗಳೂರಿನಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಶನಿವಾರ ನಡೆದ ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಸಲ್ಲಿಸಿದ ಮನವಿಯನ್ನು ಪರಿಶೀಲಿಸುತ್ತಿರುವ ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌. ಸಂಸದ ನಳಿನ್‌ ಕುಮಾರ್‌ ಕಟೀಲ್ ಮತ್ತು ಶಾಸಕ ಡಾ.ವೈ.ಭರತ್‌ ಶೆಟ್ಟಿ ಜೊತೆಗಿದ್ದರು.– ಪ್ರಜಾವಾಣಿ ಚಿತ್ರ   

ಮಂಗಳೂರು: ಕರ್ನಾಟಕವು ದೇಶದಲ್ಲೇ ಅತ್ಯಧಿಕ ಕನಿಷ್ಠ ವೇತನ ಹೊಂದಿದ್ದು, ಇದರಿಂದ ತೊಂದರೆಯಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಅಳಲು ತೋಡಿಕೊಂಡಿದ್ದಾರೆ. ಈ ಕಾರಣದಿಂದ ಉದ್ಯಮಿಗಳು ಮತ್ತು ಕಾರ್ಮಿಕರು ಇಬ್ಬರಿಗೂ ಹೊರೆಯಾಗದಂತೆ ಕನಿಷ್ಠ ವೇತನ ಪರಿಷ್ಕರಣೆಗೆ ಸೂಚಿಸಲಾಗಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ಶನಿವಾರ ನಡೆಸಿದ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ‘ಕೈಗಾರಿಕೆಗಳೂ ಉಳಿಯಬೇಕು, ಕಾರ್ಮಿಕರಿಗೂ ಅನುಕೂಲ ಆಗಬೇಕು. ಆ ರೀತಿಯಲ್ಲಿ ದರ ಪರಿಷ್ಕರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ತೆರಿಗೆ ಪರಿಷ್ಕರಣೆ: ಕೈಗಾರಿಕೆಗಳಿಗೆ ಸ್ಥಳೀಯ ಸಂಸ್ಥೆಗಳು ವಿಧಿಸುವ ತೆರಿಗೆಯ ದರವನ್ನೂ ಪರಿಷ್ಕರಣೆ ಮಾಡಲಾಗುವುದು. ವಸತಿ ಕಟ್ಟಡಗಳು ಮತ್ತು ವಾಣಿಜ್ಯ ಕಟ್ಟಡಗಳೆಂದು ವಿಭಜಿಸಿ ತೆರಿಗೆ ವಿಧಿಸಲಾಗುತ್ತಿದೆ. ಕೈಗಾರಿಕೆಗಳನ್ನು ವಾಣಿಜ್ಯ ಕಟ್ಟಡಗಳ ವ್ಯಾಪ್ತಿಯಲ್ಲಿರಿಸಲಾಗಿದೆ. ಈ ಎರಡೂ ವರ್ಗದ ಹೊರತಾಗಿ ಕೈಗಾರಿಕೆಗಳಿಗೆ ಹೊಸ ತೆರಿಗೆ ದರ ನಿಗದಿ ಮಾಡಲಾಗುವುದು. ಪ್ರಸಕ್ತ ಬಜೆಟ್‌ನಲ್ಲೇ ಈ ಘೋಷಣೆ ಹೊರಬೀಳಲಿದೆ ಎಂದು ಶೆಟ್ಟರ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.