‘ಗಾಂಧಿ ಭಾರತ’ ಹೆಸರಿನಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಘೋಷಣೆಯಡಿ ಮಂಗಳವಾರ ಬೆಳಗಾವಿಯಲ್ಲಿ ನಡೆದ ಸಮಾವೇಶ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯಿತು. ಕಾಂಗ್ರೆಸ್‌ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧದ ವಾಗ್ದಾಳಿಗೆ ಈ ಸಮಾವೇಶವನ್ನು ಬಳಸಿಕೊಂಡರು. 1924ರಲ್ಲಿ ಗಾಂಧೀಜಿ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಬೆಳಗಾವಿಯಲ್ಲಿ ನಡೆದ ಸ್ವಾತಂತ್ರ್ಯ ಯೋಧರ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಅವರು ಅಧ್ಯಕ್ಷತೆ ವಹಿಸಿದ ಏಕಮಾತ್ರ ಸಮಾವೇಶ ಇದು. ಆಗ ಗಾಂಧಿ ಅವರು ಚರಕ ತಿರುಗಿಸುವ ಮೂಲಕ ಅಧಿವೇಶನಕ್ಕೆ ಚಾಲನೆ ಕೊಟ್ಟಿದ್ದರು. ಸರಿಯಾಗಿ ನೂರು ವರ್ಷಗಳ ಬಳಿಕ, ನಮ್ಮ ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಮತ್ತೆ ಚರಕ ತಿರುಗಿಸುವ ಮೂಲಕವೇ ಅವರು ಈಗಿನ ಸಮಾವೇಶವನ್ನು ಉದ್ಘಾಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.