ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 1ರಂದು ರಾಜ್ಯದಾದ್ಯಂತ ‘ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ’ವನ್ನು ಆಚರಣೆ ಮಾಡಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
‘ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು’ ಎಂದು ಈ ಹಿಂದೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು. 2020–21ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರದ ವತಿಯಿಂದಲೇ ಸಂಸ್ಮರಣಾ ದಿನವನ್ನು ಆಚರಿಸಲಾಗುವುದು ಎಂದು ಘೋಷಿಸಲಾಗಿತ್ತು. ಅದರಂತೆ ಈಗ ಆದೇಶ ಹೊರಡಿಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.