ADVERTISEMENT

ಅಂಬೇಡ್ಕರ್ ಫೋಟೋ ಹಾಕಿಲ್ಲ ಆರೋಪ:ಜಲಜಾಕ್ಷಿ ಅಮಾನತು ಆದೇಶ ರದ್ದುಪಡಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 22:30 IST
Last Updated 19 ಆಗಸ್ಟ್ 2025, 22:30 IST
<div class="paragraphs"><p>ಹೈಕೋರ್ಟ್ </p></div>

ಹೈಕೋರ್ಟ್

   

ಬೆಂಗಳೂರು: ‘ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ’ ಎಂಬ ಆರೋಪದಡಿ ವಿಧಾನಪರಿಷತ್ತಿನ ಉಪ ಕಾರ್ಯದರ್ಶಿ ಕೆ.ಜೆ.ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ವಿಧಾನಪರಿಷತ್‌ ಕಾರ್ಯದರ್ಶಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಜಲಜಾಕ್ಷಿ ಸಲ್ಲಿಸಿದ್ದ ರಿಟ್‌ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ADVERTISEMENT

‘2024ರ ನವೆಂಬರ್ 26ರಂದು ಹಮ್ಮಿಕೊಂಡಿದ್ದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಕಿಲ್ಲ’ ಎಂಬ ಆರೋಪದಡಿ ಕೆ.ಜೆ.ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ವಿಧಾನ ಪರಿಷತ್ತಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.