ADVERTISEMENT

ಜಾಲಪ್ಪ ಅಕಾಡೆಮಿಯಿಂದ ತರಬೇತಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 20:00 IST
Last Updated 16 ಫೆಬ್ರುವರಿ 2019, 20:00 IST

ಬೆಂಗಳೂರು: ಆರ್.ಎಲ್.ಜಾಲಪ್ಪ ಅಕಾಡೆಮಿ, ಕೆಎಎಸ್ ಮತ್ತು ಪಿಎಸ್‌ಐ ಪರೀಕ್ಷೆಗೆ ಉಚಿತ ತರಬೇತಿ ನೀಡುತ್ತಿದ್ದು,ಹಿಂದುಳಿದ ವರ್ಗಗಳ ಪ್ರವರ್ಗ 1 ಮತ್ತು 2ಎ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ಮಾರ್ಚ್ 20ರಿಂದ 4 ತಿಂಗಳ ಕಾಲ ತರಬೇತಿ ನೀಡಲಾಗುವುದು.ವಸತಿ, ಊಟ, ಗ್ರಂಥಾಲಯ ಮತ್ತು ಪಠ್ಯದ ನೋಟ್ಸ್‌ಗಳಿಗೆ ಕನಿಷ್ಠ ಶುಲ್ಕ ಇರುತ್ತದೆ. ಮಹಿಳೆಯರಿಗೆ ಪ್ರತ್ಯೇಕ ವಸತಿ ಸೌಲಭ್ಯ ಕಲ್ಪಿಸಲಾಗುವುದು.ಫೆ. 28ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವೆಬ್‌ಸೈಟ್– www.rljacademy.com,ಸಂಪರ್ಕಕ್ಕೆ– 9731480759.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT