ಬಾಗಲಕೋಟೆ: ಜಮಖಂಡಿ ನಗರದಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯ ತಾಯಿ ಹೃದಯಾಘಾತದಿಂದ ಶನಿವಾರ ರಾತ್ರಿ ಸಾವಿಗೀಡಾಗಿದ್ದಾರೆ.
ಅವರು ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಮಗನಿಗೆ ಸೋಂಕು (ಪಿ-381) ದೃಢವಾದ ಸುದ್ದಿ ತಿಳಿದು ಬೇಸರಗೊಂಡಿದ್ದ ಅವರು ಬೆನ್ನಲ್ಲೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಮಗನಿಗೆ ಸೋಂಕು ಇರುವುದು ಸಂಜೆ ದೃಢಪಟ್ಟಿತ್ತು.
ಮೃತ ವೃದ್ದೆಯನ್ನು ಕೋವಿಡ್ -19 ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲುಗ ಜಿಲ್ಲಾಡಳಿತ ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.