ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹಾವೇರಿಯಲ್ಲಿ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ನಾಗರಿಕರು, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ ಸಿಗುತ್ತಿರುವುದರಿಂದ ಜನೌಷಧಿ ಕೇಂದ್ರ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಔಷಧ ಸಿಗುತ್ತಿಲ್ಲ. ಬಡವರಿಗೆ ನೆರವಾಗಿರುವ ಜನೌಷಧಿ ಕೇಂದ್ರಗಳನ್ನೂ ಮುಚ್ಚಿದರೆ ತೊಂದರೆಯಾಗುತ್ತದೆ’ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.