ADVERTISEMENT

ಖಾಸಗಿ ಒತ್ತಡಕ್ಕೆ ಮಣಿದು ಜನೌಷಧಿ ಕೇಂದ್ರ ಬಂದ್‌: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 19 ಮೇ 2025, 14:32 IST
Last Updated 19 ಮೇ 2025, 14:32 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ನವದೆಹಲಿ: ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನ ಮುಚ್ಚುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶ ಜನವಿರೋಧಿ ನಡೆ. ಖಾಸಗಿಯವರ ಒತ್ತಡಕ್ಕೆ ಮಣಿದು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಟೀಕಿಸಿದರು. 

ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬಡವರಿಗೆ ರಿಯಾಯಿತಿ ದರದಲ್ಲಿ ಔಷಧ ಸಿಗುತ್ತಿತ್ತು. ಸಿದ್ದರಾಮಯ್ಯ ಸರ್ಕಾರ ಯಾವ ಪುರುಷಾರ್ಥಕ್ಕೆ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿದೆ ಎಂಬುದು ಗೊತ್ತಿಲ್ಲ. ಈ ಕೇಂದ್ರಗಳನ್ನು ಕೂಡಲೇ ಪುನರಾರಂಭ ಮಾಡಬೇಕು’ ಎಂದು ಆಗ್ರಹಿಸಿದರು. 

ಅಕಾಲಿಕ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಹಾನಿ ಆಗಿದೆ. ಈ ಕೂಡಲೇ ಜಿಲ್ಲೆಗೆ ₹100 ಕೋಟಿ ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಿದರು. 

ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿರುವ ₹5300 ಕೋಟಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.