ADVERTISEMENT

ಹಾಲಸ್ವಾಮಿ ಮಠಕ್ಕೆ ಯಡಿಯೂರಪ್ಪ, ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 12:24 IST
Last Updated 13 ಅಕ್ಟೋಬರ್ 2022, 12:24 IST
ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)   

ಹೂವಿನಹಡಗಲಿ (ವಿಜಯನಗರ): ತಾಲ್ಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ, ಮಠದ ಕರ್ತೃ ಗದ್ದುಗೆ ದರ್ಶನ ಪಡೆದರು.

ಬಳಿಕ ಗುರು ಮನೆಯ ಸಭಾಂಗಣಕ್ಕೆ ತೆರಳಿ, ಜಿಲ್ಲೆಯ ವಿವಿಧ ಮಠಾಧೀಶರ ಆಶೀರ್ವಾದ ಪಡೆದರು. ‘ಜನರ ಆಶಯಕ್ಕೆ ತಕ್ಕಂತೆ ಉತ್ತಮ ಕೆಲಸ ಆಡಳಿತ ನೀಡಿದ್ದೇವೆ. ಮತ್ತೊಮ್ಮೆ ಸರ್ಕಾರ ನಡೆಸಲು ನಿಮ್ಮ ಆಶೀರ್ವಾದ ಬೇಕು’ ಎಂದು ಯಡಿಯೂರಪ್ಪ ಹೇಳಿದರು.

ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರು ಮುಖ್ಯಮಂತ್ರಿ ಹಾಗೂ ಗಣ್ಯರನ್ನು ಸನ್ಮಾನಿಸಿ, ಹಾಲಸ್ವಾಮಿ ಮಠದ ಪರಂಪರೆಯನ್ನು ಪರಿಚಯಿಸಿದರು.

ಇದನ್ನೂ ಓದಿ:

ನಂದಿಪುರದ ಮಹೇಶ್ವರ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ದಲಿಂಗ ಸ್ವಾಮೀಜಿ, ಅಯ್ಯನಹಳ್ಳಿ ಮಹೇಶ್ವರ ಸ್ವಾಮೀಜಿ, ಬೆಣ್ಣಿಹಳ್ಳಿಯ ಪಂಚಾಕ್ಷರಿ ಸ್ವಾಮೀಜಿ, ಅಳವುಂಡಿಯ ಮರುಳಾರಾದ್ಯ ಸ್ವಾಮೀಜಿ, ಮಲ್ಲನಕೆರೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಹಾಲ ಸೋಮೇಶ್ವರ ಸ್ವಾಮೀಜಿ, ಹಾಲ ಸಿದ್ದೇಶ್ವರ ಸ್ವಾಮೀಜಿ, ಸಣ್ಣ ಹಾಲ್ವಸ್ವಾಮೀಜಿ, ಅಮೃತೇಶ್ವರ ಸ್ವಾಮೀಜಿ, ವಿಶ್ವಾರಾಧ್ಯ ಹಾಲಸ್ವಾಮಿ, ದೊಡ್ಡ ಹಾಲಸ್ವಾಮಿ, ಅಭಿಷೇಕ ಹಾಲಸ್ವಾಮೀಜಿ ಉಪಸ್ಥಿತರಿದ್ದರು.

ADVERTISEMENT

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮುಖಂಡ ಪಿ.ವಿಜಯಕುಮಾರ್ ಇದ್ದರು.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.