ಬೆಂಗಳೂರು: ಬೆಂಗಳೂರನ್ನು ಹೊರತುಪಡಿಸಿ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಠಾತ್ತಾಗಿ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಮತ್ತು ಜನವಿರೋಧಿ ಕ್ರಮ ಎಂದು ಜನಜಾಗೃತಿ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
‘ಬಿಬಿಎಂಪಿ ಬಿಟ್ಟು ಉಳಿದ ಮಹಾನಗರ ಪಾಲಿಕೆ, ನಗರಸಭೆಗಳು, ಪುರಸಭೆಗಳು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿದಾರರು ವ್ಯತ್ಯಾಸದಿಂದ ಕೂಡಿರುವ ತೆರಿಗೆ ಪಾವತಿಸಬೇಕೆಂಬ ನಿರ್ಧಾರ ಖಂಡನೀಯ. ಸರ್ಕಾರದ ಈ ನಡೆಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.