
ಪ್ರಜಾವಾಣಿ ವಾರ್ತೆ
ಮಂಗಳೂರು: ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ನೀಡಿದರೆ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದರು.
ಭಾನುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಂದ್‌ಗೆ ಕರೆ ಕೊಡುವುದು ಸರಿಯಲ್ಲ. ಬಂದ್‌ಗೆ ಕರೆಕೊಡುವವರೇ ಆಗುವ ನಷ್ಟವನ್ನು ಭರಿಸಬೇಕಾಗುತ್ತದೆ ಎಂದರು.
ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಸೆಸ್ ಕಡಿಮೆ ಮಾಡಿದರೆ ಜನರಿಗೆ ಪ್ರಯೋಜನ ಆಗಲಿದೆ ಎನ್ನುವುದು ಭ್ರಮೆ. ತೆರಿಗೆ ಸಂಗ್ರಹ ಕಡಿಮೆಯಾದರೆ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.