ADVERTISEMENT

ತಮ್ಮ ಶಾಸಕನ ರಕ್ಷಣೆಗೆ ನಿಂತ ಸಿಎಂ ಸಿದ್ದರಾಮಯ್ಯ: ಜನಾರ್ದನ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 16:22 IST
Last Updated 19 ಜನವರಿ 2026, 16:22 IST
<div class="paragraphs"><p>ಜನಾರ್ದನ ರೆಡ್ಡಿ&nbsp;</p></div>

ಜನಾರ್ದನ ರೆಡ್ಡಿ 

   

ಬೆಂಗಳೂರು: ‘ತಮ್ಮ ಶಾಸಕನನ್ನು ರಕ್ಷಣೆ ಮಾಡಬೇಕು ಎಂಬ ಒಂದೇ ಉದ್ದೇಶದಿಂದ ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿಲ್ಲ’ ಎಂದು ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಏಳು ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದಾಗಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಏಕೆ ಹಿಂದೇಟು ಹಾಕುತ್ತಿದ್ದೀರಿ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಬೇಕು’ ಎಂದು ಆಗ್ರಹಿಸಿದರು. 

ADVERTISEMENT

‘ನಿಮ್ಮ ಶಾಸಕನೇ ಕೊಲೆ ಮಾಡಿದ್ದೆಂದು ನಿಮಗೆ ಈಗಾಗಲೇ ಗೊತ್ತಾಗಿದೆ. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರವೂ ಆಗಿದೆ. ಮೂವರು ಖಾಸಗಿ ಗನ್‌ಮೆನ್‌ಗಳನ್ನು ಬಂಧಿಸಿ, ಸಿಐಡಿಗೆ ಕೊಡುವ ಮೂಲಕ ಇದನ್ನು ಜನರು ಮರೆಯುವಂತೆ ಮಾಡಿ, ತಮ್ಮ ಶಾಸಕನನ್ನು ಬಂಧಿಸಬಾರದು ಎಂಬುದೇ ನಿಮ್ಮ ಯೋಚನೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.