ADVERTISEMENT

‘ಕಾಂಗ್ರೆಸ್‌ ಸೋಲಿಸಲು ಜೈಲಿಗೆ ಹೋಗಿದ್ದೆ’

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 19:13 IST
Last Updated 2 ಸೆಪ್ಟೆಂಬರ್ 2018, 19:13 IST

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷ ಸೋಲಿಸುವುದಕ್ಕಾಗಿ, ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಜಿಲ್ಲೆಯ ಸವದತ್ತಿ ತಾಲ್ಲೂಕು ಹೂಲಿ ಗ್ರಾಮದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ, ಸವದತ್ತಿ ಕ್ಷೇತ್ರದ ಮಾಜಿ ಶಾಸಕ ವೆಂಕರೆಡ್ಡಿ ಕಾಂಗ್ರೆಸ್ ಪಕ್ಷ ಬೆಳೆಸಲು 8 ವರ್ಷ ಜೈಲಿಗೆ ಹೋಗಿದ್ದರು. ಆದರೆ, ಆ ಪಕ್ಷ ಬೆಳೆಯುವುದನ್ನು ನಿಲ್ಲಿಸುವ ಪ್ರಯತ್ನದಲ್ಲಿ ನಾನು ಜೈಲಿಗೆ ಹೋಗಿ ಬಂದೆ. ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT