ಬಿ.ವೈ.ವಿಜಯೇಂದ್ರ
- ಫೇಸ್‌ಬುಕ್ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಮಳಿಗೆಗಳನ್ನು ತೆರವು ಮಾಡಲು ಆದೇಶ ಹೊರಡಿಸಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳು ಕನ್ನಡಿಗರಿಗೆ ಸಿಗದಂತೆ ಮಾಡಲು ಭ್ರಷ್ಟ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ರೂಪಿಸಿದೆ’ ಎಂದು ದೂರಿದ್ದಾರೆ.
‘ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯದ ಜನರಿಗೆ ಸಿಗದಂತೆ ಕಾಂಗ್ರೆಸ್ ಮಾಡುತ್ತಿದೆ. ಇದೀಗ ಅನಾರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗಿಗಳಿಗೆ ಕಡಿಮೆ ದರದ ಔಷಧಿಗಳು ಸಿಗದಂತೆ ಮಾಡಿದ್ದಾರೆ’ ಎಂದು ವಿಜಯೇಂದ್ರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.