ADVERTISEMENT

ರಾಯಚೂರು: 59,296 ಮಕ್ಕಳಿಗೆ ಅಪೌಷ್ಟಿಕತೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 19:37 IST
Last Updated 11 ಡಿಸೆಂಬರ್ 2018, 19:37 IST

ಬೆಳಗಾವಿ: ರಾಯಚೂರು ಜಿಲ್ಲೆಯಲ್ಲಿ 59,296 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ.ಶಿವನಗೌಡ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿ, ‘1,314 ಮಕ್ಕಳು ತೀವ್ರ
ಅಪೌಷ್ಟಿಕತೆ ಹಾಗೂ 57,982 ಮಕ್ಕಳು ಸಾಧಾರಣ ಅಪೌಷ್ಟಿಕತೆ ಹೊಂದಿದ್ದಾರೆ’ ಎಂದರು.

ಆರೋಗ್ಯ ಇಲಾಖೆಯ ಸಹಯೋಗದಡಿ ಪೌಷ್ಟಿಕ ಪುನರ್ವಸತಿ ಕೇಂದ್ರಗಳಲ್ಲಿ 2016–17ರಲ್ಲಿ 175 ಮಕ್ಕಳು, 2017–18ರಲ್ಲಿ 180 ಹಾಗೂ 2018–19ರಲ್ಲಿ 328 ಅಪೌಷ್ಟಿಕ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ ಎಂದರು.

ADVERTISEMENT

ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಮೂರು ವರ್ಷಗಳಲ್ಲಿ 95.49 ಕೋಟಿ ವೆಚ್ಚ ಮಾಡಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.