ADVERTISEMENT

ಜಯಪ್ರಕಾಶ್‌ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 19:26 IST
Last Updated 23 ನವೆಂಬರ್ 2020, 19:26 IST
ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ
ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ    

ಬೆಂಗಳೂರು: ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇವರು ಜೆ.ಎಚ್‌.ಪಟೇಲ್‌ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ ಪಕ್ಷೇತರರಾಗಿ ಬ್ರಹ್ಮಾವರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಒಂದು ಬಾರಿ ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಗೂ ಮೊದಲು ಹೆಗ್ಡೆ ಬಿಜೆಪಿ ಸೇರಿದ್ದರು. ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದರು. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಿದ್ದರಿಂದ ಹೆಗ್ಡೆ ನೇಪಥ್ಯಕ್ಕೆಸರಿಯುವಂತಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.