ADVERTISEMENT

ಹಾನಗಲ್‌ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್‌

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 23:08 IST
Last Updated 15 ಜೂನ್ 2021, 23:08 IST

ಬೆಂಗಳೂರು: ಶಾಸಕ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್‌ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ನಿಯಾಜ್‌ ಶೇಖ್‌ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್‌ ಪ್ರಕಟಿಸಿದೆ.

ಕಾಂಗ್ರೆಸ್‌ ಪಕ್ಷದ ಅಸಂಘಟಿತ ಕಾರ್ಮಿಕರ ಘಟಕದ ಹಾವೇರಿ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದ ನಿಯಾಜ್‌ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮಂಗಳವಾರ ಭೇಟಿಮಾಡಿ, ಪಕ್ಷ ಸೇರಿದರು. ಆ ಬಳಿಕ ಅವರನ್ನೇ ಹಾನಗಲ್‌ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT