ADVERTISEMENT

ಜ.18ಕ್ಕೆ ಜೆಡಿಎಸ್‌ ಪ್ರಮುಖರ ಸಮಿತಿ ರಚನೆ: ಎಚ್‌.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 18:36 IST
Last Updated 14 ಜನವರಿ 2021, 18:36 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ    

ಬೆಂಗಳೂರು: ಜನವರಿ 18ರಂದು ಪಕ್ಷಕ್ಕೆ ಹೊಸದಾಗಿ ಪ್ರಮುಖರ ಸಮಿತಿ ರಚಿಸಲಾಗುವುದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ಜ.18ರಂದು ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಬಳಿಕ ಹೊಸದಾಗಿ ಪ್ರಮುಖರ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗುವುದು. ನಂತರ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ, ಕಂದಾಯ ವಿಭಾಗ, ಜಿಲ್ಲೆ, ತಾಲ್ಲೂಕು ಮತ್ತು ಮತಗಟ್ಟೆ ಹಂತದ ಸಮಿತಿಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT