ADVERTISEMENT

ಪ್ರಜ್ವಲ್ ರೇವಣ್ಣ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್‌ ದೂರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2024, 9:13 IST
Last Updated 22 ಮೇ 2024, 9:13 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಬೆಂಗಳೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್‌ ದೂರು ನೀಡಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ADVERTISEMENT

ರಾಯಚೂರು ಹಾಗೂ ಶಿವಮೊಗ್ಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಇದನ್ನು ಉಲ್ಲೇಖಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮತ್ತು ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜೆಡಿಎಸ್‌ ನಾಯಕ ಎಚ್‌.ಎಂ ರಮೇಶ್ ಗೌಡ ದೂರು ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 202ರಡಿ ದೂರು ದಾಖಲಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.