
ಪ್ರಜಾವಾಣಿ ವಾರ್ತೆ
ಬೆಂಗಳೂರು: ಜೆಡಿಎಸ್‌ನ ಮೂವರು ನಾಯಕರು ‘ಕೈ’ ಹಿಡಿಯಲು ನಿರ್ಧರಿಸಿದ್ದಾರೆ.
ಮಂಡ್ಯದ ಮಾಜಿ ಶಾಸಕ ಎಂ. ಶ್ರೀನಿವಾಸ್ , ವಿಧಾನ ಪರಿಷತ್ ಮಾಜಿ ಸದಸ್ಯ ನಾಗಮಂಗಲದ ಅಪ್ಪಾಜಿ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ ಕಾಂಗ್ರೆಸ್ ಸೇರಲಿರುವ ನಾಯಕರು.
ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.