ADVERTISEMENT

‘ಜನತಾ ಜಲಧಾರೆ’ಗೆ ಜೆಡಿಎಸ್‌ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 20:40 IST
Last Updated 16 ಏಪ್ರಿಲ್ 2022, 20:40 IST
ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೆಆರ್‌ಎಸ್‌ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ‘ಜನತಾ ಜಲಧಾರೆ’ ಯಾತ್ರೆಗೆ ಶನಿವಾರ ಚಾಲನೆ ನೀಡಿದರು. ಶಾಸಕ ರವೀಂದ್ರ ಶ್ರೀಕಂಠಯ್ಯ, ವಕ್ತಾರ ಟಿ.ಎ.ಶರವಣ ಇದ್ದಾರೆ-–-ಪ್ರಜಾವಾಣಿ ಚಿತ್ರ
ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೆಆರ್‌ಎಸ್‌ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ‘ಜನತಾ ಜಲಧಾರೆ’ ಯಾತ್ರೆಗೆ ಶನಿವಾರ ಚಾಲನೆ ನೀಡಿದರು. ಶಾಸಕ ರವೀಂದ್ರ ಶ್ರೀಕಂಠಯ್ಯ, ವಕ್ತಾರ ಟಿ.ಎ.ಶರವಣ ಇದ್ದಾರೆ-–-ಪ್ರಜಾವಾಣಿ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ನದಿ ನೀರಿನ ಸದ್ಬಳಕೆ ಹಾಗೂ ವಿವಿಧ ನೀರಾವರಿ ಯೋಜನೆಗಳಸಮಗ್ರ ಅನುಷ್ಠಾನದ ಸಂಕಲ್ಪದೊಂದಿಗೆ ಆರಂಭಿಸಿರುವ ‘ಜನತಾ ಜಲಧಾರೆ’ ಕಾರ್ಯಕ್ರಮವನ್ನು ಜೆಡಿಎಸ್‌ ಪಕ್ಷ ರಾಜ್ಯದ ವಿವಿಧೆಡೆ ಶನಿವಾರ ಏಕಕಾಲದಲ್ಲಿ ಆರಂಭಿಸಿತು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಮೈಸೂರಿನಲ್ಲಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಆಲಮಟ್ಟಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೈಸೂರಿನಲ್ಲಿ ಮಾತನಾಡಿದ ಎಚ್‌.ಡಿ.ದೇವೇಗೌಡ ಅವರು, ‘ಕುಡಿಯುವ ನೀರಿಗಾಗಿ ಸಂಸತ್‌ನಲ್ಲಿ ನನ್ನದು ಏಕಾಂಗಿ ಹೋರಾಟ ಆಗಿತ್ತು. ರಾಜ್ಯದ ಕಾಂಗ್ರೆಸ್‌, ಬಿಜೆಪಿ ಸಂಸದರು ನನ್ನ ಹೋರಾಟಕ್ಕೆ ಬೆಂಬಲ ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಆಲಮಟ್ಟಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು, ‘ಜೆಡಿಎಸ್‌ ಅಧಿಕಾರಕ್ಕೆ ಬಂದರೆನದಿ ನೀರಿನ ಸದ್ಬಳಕೆ ಮಾಡಲಿದೆ. ನೀರಾವರಿಗಾಗಿಯೇ ₹ 3 ಲಕ್ಷ ಕೋಟಿ ಮೀಸಲಿರಿಸಲಾಗುವುದು’ ಎಂದು ಹೇಳಿದರು.

ರಾಜ್ಯದ 15 ಕಡೆಜಲಧಾರೆಯ ‘ಗಂಗಾರಥ’ಗಳಿಗೆ ಚಾಲನೆ ನೀಡಲಾಯಿತು. 94 ಕಡೆಗಳಲ್ಲಿ ನದಿ ನೀರು ಸಂಗ್ರಹಿಸಿ, 180 ವಿಧಾನಸಭಾ ಕ್ಷೇತ್ರಗಳ ಮೂಲಕ ಈ ‘ಗಂಗಾರಥ’ಗಳು ಹಾದುಹೋಗಲಿವೆ. ಮೇ 8ರಂದು ರಾಜಧಾನಿ ಬೆಂಗಳೂರು ತಲುಪಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.