ADVERTISEMENT

ಹಿಂದಿ ಬಳಕೆ– ಬ್ರಿಟಿಷರಿಗೂ ಬಿಜೆಪಿಗೂ ವ್ಯತ್ಯಾಸವಿಲ್ಲ: ಎಚ್.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 19:46 IST
Last Updated 9 ಏಪ್ರಿಲ್ 2022, 19:46 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಭಾರತದ ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮೊದಲು ಬ್ರಿಟಿಷರು ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದೆ. ಬ್ರಿಟಿಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಅನ್ಯ ರಾಜ್ಯಗಳ ಮಧ್ಯ ವ್ಯವಹರಿಸುವಾಗ ಹಿಂದಿ ಬದಲು ಇಂಗ್ಲಿಷ್ ಬಳಸಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಒಡೆದಾಳುವ ನೀತಿಗೆ ಈ ಮಾತು ಜೀವಂತ ಸಾಕ್ಷಿಯಾಗಿದೆ ಎಂದಿದ್ದಾರೆ.

‘ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ಮಧ್ಯೆ ಅಮಿತ್ ಶಾ ಅವರು ಹುಳಿ ಹಿಂಡುವ ಜತೆಗೆ, ಹಿಂದಿ ಹೇರಲು ಮುಂದಾಗಿರುವುದು ಆಘಾತಕಾರಿ’ ಎಂದು ಹೇಳಿದ್ದಾರೆ.

ADVERTISEMENT

‘ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತರುತ್ತಿರುವ ಬಿಜೆಪಿಯು ಸಮಾಜ ಮತ್ತು ಜನರನ್ನು ಒಡೆಯುತ್ತಿದೆ. ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ’ ಎಂದು ಕುಟುಕಿದ್ದಾರೆ.

‘ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ’ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.