ADVERTISEMENT

ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್‌–ಸೂರಜ್‌ ರೇವಣ್ಣ ಭೇಟಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 0:52 IST
Last Updated 28 ಜನವರಿ 2024, 0:52 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಸೂರಜ್‌ ರೇವಣ್ಣ ಭೇಟಿ ಮಾಡಿದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಸೂರಜ್‌ ರೇವಣ್ಣ ಭೇಟಿ ಮಾಡಿದರು   

ಬೆಂಗಳೂರು: ಎಚ್‌.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್‌ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶನಿವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.

ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಬೆಳಿಗ್ಗೆ ಬಂದ ಸೂರಜ್‌ ಜೊತೆ ಶಿವಕುಮಾರ್‌ ಗೌಪ್ಯವಾಗಿ ಮಾತುಕತೆ ನಡೆಸಿದರು. ಯಾವ ಉದ್ದೇಶಕ್ಕೆ ಶಿವಕುಮಾರ್‌ ಅವರನ್ನು ಸೂರಜ್‌ ಭೇಟಿ ಮಾಡಿದರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಈಗಾಗಲೇ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಯಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಸೂರಜ್‌ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.