ADVERTISEMENT

ಪರಿಷತ್‌ ಸದಸ್ಯರಾಗಿ ಸೂರಜ್‌ ರೇವಣ್ಣ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 9:08 IST
Last Updated 28 ಜನವರಿ 2022, 9:08 IST
ಪರಿಷತ್‌ ಸದಸ್ಯರಾಗಿ ಸೂರಜ್‌ ರೇವಣ್ಣ ಪ್ರಮಾಣವಚನ
ಪರಿಷತ್‌ ಸದಸ್ಯರಾಗಿ ಸೂರಜ್‌ ರೇವಣ್ಣ ಪ್ರಮಾಣವಚನ   

ಬೆಂಗಳೂರು: ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದ ಸೂರಜ್‌ ರೇವಣ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸೂರಜ್‌ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣವಚನ ಬೋಧಿಸಿದರು. ಶಾಸಕರೂ ಆಗಿರುವ ಸೂರಜ್‌ ಅವರ ತಂದೆ ಎಚ್‌.ಡಿ. ರೇವಣ್ಣ, ತಾಯಿ ಭವಾನಿ ಮತ್ತು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಉಪಸ್ಥಿತರಿದ್ದರು.

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಸದಸ್ಯರ ಪ್ರಮಾಣವಚನ ಸಮಾರಂಭ ಜನವರಿ 6ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದಿತ್ತು. ಆದರೆ, ಆ ದಿನ ಒಳ್ಳೆಯ ಮುಹೂರ್ತವಿಲ್ಲ ಎಂಬ ಕಾರಣದಿಂದ ಸೂರಜ್‌ ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.